ನಾವು ಸಾಯಲು ಸಿದ್ಧ. ಆದರೆ, ನಮ್ಮ ಪಕ್ಷವನ್ನು ತ್ಯಜಿಸುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು ಖಡಕ್ ಆಗಿ ಹೇಳಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ತಮ್ಮ ಅರ್ಜಿಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ್ದಾರೆ.
40 ವರ್ಷಗಳ ಕಾಲ ಪಕ್ಷದಲ್ಲಿದ್ದು ಓಡಿಹೋಗುವವರು ಇದ್ದರೂ ಸತ್ತಂತೆ.ಅವರ ಅಸ್ತಿತ್ವ ಉಳಿದಿಲ್ಲ. ಇದು ಡಾ.ರಾಮ್ ಮನೋಹರ್ ಲೋಹಿಯಾ ಹೇಳಿದ ಸಾಲುಗಳು. ನಾನು ಯಾರ ಭಾವನೆಗೂ ಧಕ್ಕೆ ತರಲು ಬಯಸಿಲ್ಲ. ಸತ್ಯವನ್ನೇ ಹೇಳಿದ್ದೇನೆ ಎಂದು ಸಂಸದ ಸಂಜಯ್ ಅವರು ತಿಳಿಸಿದ್ದಾರೆ.
ಬಂಡಾಯ ಶಾಸಕ ಏಕನಾಥ್ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಲಾಗಿದೆ. ಶಿವಸೇನೆಯ ಈ ಕ್ರಮದ ವಿರುದ್ಧ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ಕಾನೂನು ಸಮರ ಮೊದಲುಗೊಂಡಿದೆ. ಏಕನಾಥ್ ಶಿಂಧೆ ಮತ್ತು ಬಂಡಾಯ ಶಾಸಕರ ಪರವಾಗಿ ಹರೀಶ್ ಸಾಳ್ವೆ ವಾದ ಮಂಡಿಸುತ್ತಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.