Saturday, November 23, 2024
Saturday, November 23, 2024

ಅರ್ಹ ಕಾರ್ಮಿಕರ ಮಕ್ಕಳಿಗೆ ಐಎಎಸ್& ಕೆಎಎಸ್ ಬೋಧನಾ ತರಬೇತಿ-ಶಿವರಾಮಹೆಬ್ಬಾರ್

Date:

ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನಿ ರ್ಮಿಸಲು ಉದ್ದೇಶಿಸಲಾಗಿದೆ. ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುತ್ತದೆ ಎಂದು ರಾಜ್ಯ ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್ ಅವರು ಹೇಳಿದ್ದಾರೆ.

ಶಿವಮೊಗ್ಗ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಇರುವ ಒಟ್ಟು ಕಾರ್ಮಿಕ ಕುಟುಂಬಗಳಲ್ಲಿ ಮೊದಲ ಹಂತದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ 30,000 ಕುಟುಂಬಗಳ ಸದಸ್ಯರಿಗೆ 20 ರೀತಿಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ವ್ಯಕ್ತಿಗೆ 11600 ರೂ.ಗಳಂತೆ ಹಣ ಖರ್ಚು ಮಾಡಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ 30000 ಮಂದಿಯ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಮಕ್ಕಳಲ್ಲೂ ಎಲ್ಲಾ ರೀತಿಯ ಅರ್ಹತೆ ಇದ್ದು ಅವರಿಗೂ ಸಮಾಜದಲ್ಲಿ ಗುರುತಿಸುವ ಮತ್ತು ಸ್ವಾಭಿಮಾನದಿಂದ ಜೀವಿಸುವ ಅವಕಾಶ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಗೊಳಿಸಲಾಗುತ್ತಿದೆ. ಕಾರ್ಮಿಕರ ಅರ್ಹ ಮತ್ತು ಆಸಕ್ತ ಮಕ್ಕಳನ್ನು ಪೈಲಟ್ ಆಗಿಸುವ ನಿಟ್ಟಿನಲ್ಲಿ 18ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ.

ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿಯೊಂದಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ದೇಶದಲ್ಲೇ ಮೊದಲು ಎಂದರು.
ಈಗಾಗಲೇ ರಾಜ್ಯದಲ್ಲಿ 4,91,000 ಕಾರ್ಮಿಕ ಮಕ್ಕಳಿಗೆ 400 ಕೋ.ರೂ.ಗಳ ವಿದ್ಯಾರ್ಥಿವೇತನ ನೀಡಲಾಗಿದೆ. ಅಲ್ಲದೆ ರಾಜ್ಯದ ಒಟ್ಟು ಕಾರ್ಮಿಕರಲ್ಲಿ ಈವರೆಗೆ ಸುಮಾರು 70000 ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರಾಜ್ಯದ ಅಸಂಘಟಿತ ಕಾರ್ಮಿಕರು, ಉದ್ಯೋಗ ಅರಸಿ ಊರಿಂದೂರಿಗೆ ತೆರಳುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಹಾಗೂ ಸರ್ಕಾರಿ ಸೇವಾಸೌಲಭ್ಯಗಳಿಗಾಗಿ ಇ-ಶ್ರಮ್ ಕಾರ್ಡನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳು ಗೋಚರಿಸಿದಲ್ಲಿ ಚಿಕಿತ್ಸೆಗಾಗಿ ಮಾಡಲಾದ ವೈದ್ಯಕೀಯ ವೆಚ್ಚವನ್ನು ಸರ್ಕಾರದ ವತಿಯಿಂದ ಮರುಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರು ಕೈಗೊಂಡ ಕ್ರಮ ಅಭಿನಂದನಾರ್ಹವಾದುದಾಗಿದೆ ಮಾತ್ರವಲ್ಲ ಸಕಾಲದಲ್ಲಿ ಅಸಂಖ್ಯಾತ ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ ಕೀರ್ತಿ ಕಾರ್ಮಿಕ ಸಚಿವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಹೊರರಾಜ್ಯಗಳಿಂದ ರಾಜ್ಯದ ವಿವಿದೆಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಸಂಖ್ಯಾತ ಕಾರ್ಮಿಕರನ್ನು ಕೋವಿಡ್ ನಂತಹ ಸಂದರ್ಭದಲ್ಲಿ ಸುರಕ್ಷಿತವಾಗಿ ಊರಿಗೆ ಬಿಟ್ಟು ಬರಲಾಯಿತು ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದ್ದಾರೆ .

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡರು, ಡಿ.ಎಸ್.ಅರುಣ್, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿ.ಇ.ಒ. ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸತೀಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...