ಸರ್ಕಾರಿ ಜಮೀನುಗಳಲ್ಲಿ ಅನೇಕ ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂಮಿ ರಹಿತರು, ಸಣ್ಣ ರೈತರ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಾಂ 94ಘ (4) ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ -57ರಲ್ಲಿ ಅರ್ಜಿಯನ್ನು ಸ್ವೀಕರಿಸಲು ಕಾಲಾವಕಾಶವನ್ನು ರಾಜ್ಯ ಸರ್ಕಾರ ದಿನಾಂಕ:30-05-2022ರಿಂದ ಒಂದು ವರ್ಷದ ಅವಧಿಯವರಿಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಆದ್ದರಿಂದ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ನಮೂನೆ-57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕ 30-05-2022 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿರುವ ವಿಷಯವನ್ನು ಸಾರ್ವಜನಿಕರಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವಂತೆ ಹಾಗೂ ಸದರಿ ಅಧ್ಯಾದೇಶದಲ್ಲಿ ತಿಳಿಸಿರುವಂತೆ ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯವರು ಆದೇಶ ಹೊರಡಿಸಿದ್ದಾರೆ.