ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ.
ಈ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.
ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಿನ್ನಲೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಮಾರ್ಗಸೂಚಿಯಲ್ಲಿ ಒಳಗೊಂಡಿರುವ ಅಂಶಗಳು ಹೀಗಿವೆ.
ಶೀತ, ಕೆಮ್ಮು, ಜ್ವರ ಇದ್ದರೆ ಮಕ್ಕಳಿಗೆ ಕಡ್ಡಾಯವಾಗಿ ರಜೆ ನೀಡಬೇಕು.
ಶಾಲೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೆ ರಜೆ ನೀಡಬೇಕು.
ಮಕ್ಕಳು ಜ್ವರ, ಶೀತ, ಕಡಿಮೆ ಆಗುವ ತನಕ ಶಾಲೆಗೆ ಬರುವುದು ಬೇಡ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಒಂದು ವೇಳೆ ಸೋಂಕು ದೃಢಪಟ್ಟರೆ ಶಾಲಾ ಕೊಠಡಿಯನ್ನ ಸ್ಯಾನಿಟೈಸ್ ಮಾಡಬೇಕು.
ಕೊರೋನಾ ಸೋಂಕು ದೃಢಪಟ್ಟಿರುವುದು ಶಾಲೆಗಳು ಮುಚ್ಚಿಡುವಂತಿಲ್ಲ.
ಒಂದು ವೇಳೆ ಆ ರೀತಿ ಮಾಡಿದರೆ ಶಾಲೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ಡಾ. ಡಿ. ರಂದೀಪ್ ಹೇಳಿದ್ದಾರೆ.