Sunday, October 11, 2026
Sunday, October 11, 2026

ಟಿ 20 ಕ್ರಿಕೆಟ್ ಐರ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್ ಗಳ ರೋಚಕ ಜಯ

Date:

ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಸಿಡಿಸಿದ ಚೊಚ್ಚಲ ಶತಕ ಹಾಗೂ ಸಂಜು ಸ್ಯಾಮ್ಸನ್ ಅಬ್ಬರದ ಆಟದಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ 4 ರನ್ ಗಳ ರೋಚಕ ಜಯ ಸಾಧಿಸಿದೆ.

ಡಬ್ಲೀನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿತು.

ಪಂದ್ಯದ ಕೊನೆಯ ಓವರ್ ನಲ್ಲಿ 17 ರನ್ ಗಳಿಸಬೇಕಿತ್ತು. ಆದರೆ ಐರ್ಲೆಂಡ್ 11 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಾಯಕ ಆಂಡೆ ಬಲರ್ಬೆನ್ (60), ಪಾಲ್ ಸ್ಟಿರ್ಲಿಂಗ್ (40) ಮೊದಲ ವಿಕೆಟ್ ಗೆ 72 ರನ್ ಜೊತೆಯಾಟ ನಿಭಾಯಿಸಿದರು.ಆದರೆ ಹೆರ್ರಿ ಟೆಕ್ಟರ್ (39), ಜಾರ್ಜ್ ಡಾಕ್ಟ್ರೆಲ್ (ಅಜೇಯ 34) ಮತ್ತು ಮಾರ್ಕ್ ಆದಿರ್ (ಅಜೇಯ 23) ಹೋರಾಟ ವ್ಯರ್ಥಗೊಂಡಿತು.

ಕಠಿಣ ಗುರಿ ಬೆಂಬತ್ತಿದ ಐರ್ಲೆಂಡ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಅವರನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಗೆ 176 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...