ಕರ್ನಾಟಕಾದ್ಯಂತ ಜುಲೈ 1 ರಿಂದ ನಾಲ್ಕು ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 30 ಹಾಗೂ ಜುಲೈ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕಾದ್ಯಂತ ಜುಲೈ 1 ರಿಂದ 4 ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 30 ಹಾಗೂ ಜುಲೈ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಚದುರಿದ ಮಳೆ ಬೀಳಲಿದೆ, ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.