Thursday, July 9, 2026
Thursday, July 9, 2026

ಶಿಂಧೆ ಬಣಕ್ಕೆ ಬಿಜೆಪಿ ಜೊತೆ ಸರ್ಕಾರ ರಚನೆಗೆ ಆಸಕ್ತಿ

Date:

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ವಿಚಾರ ನಾವು ಸಂಭ್ರಮಿಸುವ ಬೆಳವಣಿಗೆ ಅಲ್ಲ ಎಂದು ಭಿನ್ನಮತೀಯ ಮುಖಂಡ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ನಾವು ಸೂಚಿಸಿದ ಸಮಸ್ಯೆಗಳನ್ನು ಉದ್ಧವ್ ಠಾಕ್ರೆ ಪರಿಗಣಿಸಿಲ್ಲ ಎಂದು ಬಂಡಾಯ ಬಣದ ವಕ್ತಾರ ದೀಪಕ್ ಕೇಸರ್‍ಕರ್ ಸ್ಪಷ್ಟಪಡಿಸಿದರು.

ಪಕ್ಷದೊಳಗಿನ ಆಂತರಿಕ ಸಂಘರ್ಷ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯ ಪರಿಣಾಮ ಎಂದು ಅವರು ಹೇಳಿದರು.
ಸಂಜಯ್ ರಾವುತ್ ಅವರಿಗೆ ಪಕ್ಷದಲ್ಲಿ ಹೆಚ್ಚುತ್ತಿರುವ ಪ್ರಾಧಾನ್ಯತೆ ಅಂಶವನ್ನೂ ಬಣ ಒತ್ತಿ ಹೇಳಿದೆ.

ಕಾಂಗ್ರೆಸ್ ಮತ್ತು ಎನ್‍ಸಿಪಿ ಜತೆ ಹೋರಾಡುವ ವೇಳೆ ನಮ್ಮ ನಾಯಕರ ವಿರುದ್ಧ ಮುನಿಸಿಕೊಂಡಿದ್ದಕ್ಕೆ ಬೇಸರವಿದೆ ಎಂದರು.

ಸೈದ್ಧಾಂತಿಕವಾಗಿ ಭಿನ್ನವಾಗಿರುವ ಎನ್‍ಸಿಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಅಸಹಜ ಎಂದು ಕರೆದ ಅವರು, ಬಿಜೆಪಿ ಜತೆ ಕೈಜೋಡಿಸುವ ಒಲವು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಠಾಕ್ರೆ ಬಣದಲ್ಲಿ ಕೇವಲ 15 ಶಾಸಕರು ಉಳಿದುಕೊಂಡ ಹಿನ್ನೆಲೆಯಲ್ಲಿ ಸದನದಲ್ಲಿ ಬಲಾಬಲ ಪರೀಕ್ಷೆಗೆ ಸುಪ್ರೀಂಕೋರ್ಟ್ ಸೂಚಿಸಿದ ಬಳಿಕ ಠಾಕ್ರೆ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ಹಾಗೂ ಎನ್‍ಸಿಪಿ ಬಗ್ಗೆ ಹಲವು ಸಂಸದರಿಗೂ ಅಸಮಾಧಾನ ಇದೆ ಎಂದು ಕೇಸರ್‍ಕರ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...