Monday, December 15, 2025
Monday, December 15, 2025

ನಾನು ಈಗಲೂ ನಿಮ್ಮ ಭಾವನೆಗಳನ್ನುಗೌರವಿಸುತ್ತೇನೆ- ಉದ್ಧವ್

Date:

ಪ್ರಜಾಪ್ರಭುತ್ವದಲ್ಲಿ, ಸಂಖ್ಯೆಗಳನ್ನು ತೋರಿಸಲು ತಲೆಗಳನ್ನು ಎಣಿಸಲಾಗುತ್ತದೆ. ನನಗೆ ಅದರಲ್ಲಿ ಆಸಕ್ತಿ ಇಲ್ಲ. ನಾನು ಈ ಆಟಗಳನ್ನು ಆಡಲು ಬಯಸುವುದಿಲ್ಲ. ನಾಳೆ ಅವರು ಶಿವಸೇನಾ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮಗನನ್ನು ಕೆಳಗಿಳಿಸಿದ್ದೇವೆ.
ವಿಧಾನಸಭೆಯಲ್ಲಿ ವಿಶ್ವಾಸ ಮತಕ್ಕಾಗಿ ಯಾಚಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಉದ್ಧವ್ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಡಿಯೊ ಸಂವಾದ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ ಅವರು, ನಾನು ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದರು.ಸಿಎಂ ಕುರ್ಚಿ ಬಿಟ್ಟಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಏನೇ ಮಾಡಿದರೂ ಮರಾಠಿಗರು ಮತ್ತು ಹಿಂದುತ್ವಕ್ಕಾಗಿ ಮಾಡಿದ್ದೇನೆ. ಇಂದು ಎಲ್ಲರ ಸಮ್ಮುಖದಲ್ಲಿ ರಾಜ್ಯದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸುತ್ತಿದ್ದೇನೆ ಎಂದರು.

ದೇಶಾದ್ಯಂತ ಗಲಭೆಗಳು ನಡೆದವು, ಆದರೆ ಮಹಾರಾಷ್ಟ್ರವು ಇದಕ್ಕೆ ಹೊರತಾಗಿತ್ತು. ನನ್ನ ಮುಸ್ಲಿಂ ಸಹೋದರರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ‘ಪ್ರಜಾಪ್ರಭುತ್ವದಲ್ಲಿ, ಸಂಖ್ಯೆಗಳನ್ನು ತೋರಿಸಲು ತಲೆಗಳನ್ನು ಎಣಿಸಲಾಗುತ್ತದೆ. ನನಗೆ ಅದರಲ್ಲಿ ಆಸಕ್ತಿ ಇಲ್ಲ. ನಾನು ಈ ಆಟಗಳನ್ನು ಆಡಲು ಬಯಸುವುದಿಲ್ಲ. ನಾಳೆ ಅವರು ಶಿವಸೇನಾ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮಗನನ್ನು ಕೆಳಗಿಳಿಸಿದ್ದೇವೆ ಎಂದು ಹೇಳುತ್ತಾರೆ. ನಾನು ಅನಿರೀಕ್ಷಿತ ರೀತಿಯಲ್ಲಿ (ಅಧಿಕಾರಕ್ಕೆ) ಬಂದಿದ್ದೇನೆ ಮತ್ತು ನಾನು ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ. ನಾನು ಇಲ್ಲೇ ಇರುತ್ತೇನೆ. ಮತ್ತೊಮ್ಮೆ ಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನಾನು ನನ್ನ ಜನರೆಲ್ಲರನ್ನು ಒಟ್ಟುಗೂಡಿಸುತ್ತೇನೆ ಎಂದು ಠಾಕ್ರೆ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಶಿವಸೇನಾ ಪರವಾಗಿದ್ದದ್ದಕ್ಕೆ ಠಾಕ್ರೆ ಧನ್ಯವಾದ ಹೇಳಿದ್ದಾರೆ.

‘ಸುಪ್ರೀಂಕೋರ್ಟ್ ವಿಶ್ವಾಸಮತ ಪರೀಕ್ಷೆಯ ತೀರ್ಪು ನೀಡಿದೆ. ನಿಯೋಗವು ಅವರನ್ನು ಭೇಟಿಯಾದ ನಂತರ 24 ಗಂಟೆಗಳಲ್ಲಿ ವಿಶ್ವಾಸ ಮತ ಯಾಚಿಸುವಂತೆ ಹೇಳುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿಹಿಡಿದ ರಾಜ್ಯಪಾಲರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ತಮ್ಮ ಸರ್ಕಾರಕ್ಕೆ ಪ್ರಸ್ತುತ ಬಿಕ್ಕಟ್ಟನ್ನು ಉಂಟುಮಾಡಿದ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ‘ನಿಮಗೆ ನನ್ನ ಮೇಲೆ ಯಾಕ ಕೋಪ? ಕಾಂಗ್ರೆಸ್ ಅಥವಾ ಎನ್‌ಸಿಪಿ? ಸೂರತ್‌ಗೆ ಹೋಗಿ ಮಾತನಾಡುವ ಬದಲು ನೀವು ಮಾತೋಶ್ರೀ ಬಳಿ ನನ್ನ ಬಳಿಗೆ ಬರಬೇಕಿತ್ತು. ನಾನು ಈಗಲೂ ನಿಮ್ಮ ಭಾವನೆಗಳನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...