Tuesday, August 25, 2026
Tuesday, August 25, 2026

ಕೊಲೆಯ ಕೃತ್ಯ ಒಪ್ಪಿಕೊಂಡ ಪಾತಕಿಗಳ ಶಿಕ್ಷೆಗೆ ಉಗ್ರ ಕಾಯಿದೆ ತರಬೇಕು

Date:

ರಾಜಸ್ತಾನದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ತಾವೇ ಕೊಂದಿರುವುದಾಗಿ ಆ ಇಬ್ಬರು ಮುಸ್ಲಿಮರು ಹೇಳಿದ್ದಾರೆ. ಅವರು ಒಪ್ಪಿಕೊಂಡ ನಂತರವೂ ತನಿಖೆಯ ಅಗತ್ಯವೇನಿದೆ. ಕೂಡಲೇ ಅವರನ್ನು ಗುಂಡಿಟ್ಟು ಕೊಲ್ಲಬೇಕು ಇಲ್ಲವೇ ನೇಣಿಗೆ ಹಾಕಬೇಕು‘ ಎಂದು ಶಾಸಕ ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು
ರಾಜಸ್ತಾನದಲ್ಲಿ ನಡೆದಿರುವ ಕೊಲೆಗಡುಕ ಕೃತ್ಯ ಹಿಂದೂ ಸಮಾಜಕ್ಕೆ ಹಾಕಿರುವ ಸವಾಲು. ಇದು ಹಿಂದೂಗಳಿಗೆ ಮಾಡಿರುವ ಅಪಮಾನ ಎಂದು ಹೇಳಿದ ಈಶ್ವರಪ್ಪ, ಅಯೋಧ್ಯೆಯ ರೀತಿ ಕಾಶಿ, ಮಥುರಾದಲ್ಲಿ ಮುಸ್ಲಿಮರ ವಶದಲ್ಲಿರುವ ಹಿಂದೂಗಳ ಶ್ರದ್ಧಾ ಕೇಂದ್ರಗಳನ್ನು ವಾಪಸ್ ಪಡೆಯಬೇಕು. ಕಾಶಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ಅದು ಮುಗಿದ ನಂತರ ಅಲ್ಲಿನ ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಸುಪರ್ದಿಗೆ ಬರಲಿವೆ ಎಂದರು.

ಆರೋಪಿಗಳು ತಮ್ಮ ಕೃತ್ಯ ಬಹಿರಂಗವಾಗಿ ಒಪ್ಪಿಕೊಂಡ ನಂತರ ಅವರಿಗೆ ಉಗ್ರ ಶಿಕ್ಷೆ ವಿಧಿಸಲು ಅವಕಾಶವಾಗುವಂತೆ ಕಾನೂನಿಗೆ ತಿದ್ದುಪಡಿ ತನ್ನಿ. ಆ ನಿಟ್ಟಿನಲ್ಲಿ ತುರ್ತಾಗಿ ಸಂಸತ್ ಅಧಿವೇಶನ ಕರೆಯಿರಿ‘ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸುವುದಾಗಿ ತಿಳಿಸಿದರು.

ಕಾಂಗ್ರೆಸ್‌ನ ಮುಸ್ಲಿಮರ ಓಲೈಕೆ ನೀತಿಯಿಂದಾಗಿಯೇ ಹಿಂದೂ ಸಮಾಜಕ್ಕೆ ಈ ದುಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ, ‘ಕೊಲೆಗಡುಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸದೇ ಎಐಸಿಸಿ ನಾಯಕ ರಾಹುಲ್‌ಗಾಂಧಿ ಬರೀ ಶಾಂತಿ–ಸುವ್ಯವಸ್ಥೆ ಕಾಪಾಡುವಂತೆ ರಾಜಸ್ತಾನದ ಕಾಂಗ್ರೆಸ್ ಸರ್ಕಾರಕ್ಕೆ ಹೇಳಿದ್ದಾರೆ. ಇದು ನಾಚಿಕೆಗೇಡು. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಈ ಕೃತ್ಯವನ್ನು ಕಠಿಣ ಶಬ್ಧಗಳಲ್ಲಿ ಖಂಡಿಸಿಲ್ಲ‘ ಎಂದು ಟೀಕಿಸಿದರು.

ಟೈಲರ್ ಕೊಲೆ ಮಾಡಿರುವ ಆರೋಪಿಗಳು ನಂತರ ದೇಶದ ಪ್ರಧಾನಿಗೂ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಹಿಂದೂ ಸಮಾಜದ ತಾಳ್ಮೆ ಪರೀಕ್ಷಿಸುವುದು ಬೇಡ. ಸಮಾಜ ದಂಗೆ ಏಳುವ ಮುನ್ನ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ. ಇಂತಹ ಭಯೋತ್ಪಾದನಾ ಕೃತ್ಯಗಳನ್ನು ಮಟ್ಟ ಹಾಕಲು ಸಂಘಟಿತ ಹೋರಾಟಕ್ಕೆ ವಿಶ್ವಸಂಸ್ಥೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...