Sunday, October 11, 2026
Sunday, October 11, 2026

ಆಂಧ್ರ ಮತ್ತು ತೆಲಂಗಾಣದಂತೇ ನಮ್ಮಲ್ಲೂ ಎರಡು ರಾಜ್ಯಗಳಾಗಬೇಕು-ಸಚಿವ ಕತ್ತಿ

Date:

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ಪುನರುಚ್ಛರಿಸಿರುವ ಸಚಿವ ಉಮೇಶ್ ಕತ್ತಿ, ಆಂಧ್ರ ಮತ್ತು ತೆಲಂಗಾಣದಂತೆಯೇ ನಮ್ಮ ರಾಜ್ಯದಲ್ಲಿಯೂ ಪ್ರತ್ಯೇಕ ರಾಜ್ಯವಾಗಬೇಕು ಎಂಬುದು ನನ್ನ ಆಶಯ ಎಂದು ಸಚಿವ ಉಮೇಶ್ ಕತ್ತಿ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಉಮೇಶ್ ಕತ್ತಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ.

ಪ್ರತ್ಯೇಕ ರಾಜ್ಯವಾದರೂ ಕೂಡ ನಾವು ಕನ್ನಡಿಗರಾಗಿಯೇ ಇರುತ್ತೇವೆ. ಆಂಧ್ರ, ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಪ್ರತ್ಯೇಕ ರಾಜ್ಯವಾಗಲಿ ಎಂದು ಬಯಸುತ್ತೇನೆ. ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ ಎಂದಿದ್ದಾರೆ.

ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...