ಅನುದಾನಿತ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.
ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯೂ ಸಹ ಅನುದಾನದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಜೂನ್ 23ರ ಅನಧಿಕೃತ ಟಿಪ್ಪಣಿಯಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿಸೆಂಬರ್ 31ರವರೆಗೆ ವಿವಿಧ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಲು ಆರ್ಥಿಕ ಇಲಾಖೆಯು ಸಹಮತಿಯನ್ನು ನೀಡಿದೆ.