ಭಾರತದ ರಕ್ಷಣಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಶುರುವಾಗಿದೆ. ಮೇಕ್ ಇನ್ ಇಂಡಿಯಾದ ಜೊತೆಗೆ ಆತ್ಮನಿರ್ಭರ ಭಾರತ ಅಭಿಯಾನದಲ್ಲಿ ಮತ್ತೊಂದು ಹೆಜ್ಜೆ ಇರಿಸಲು ಸಜ್ಜಾಗಿದೆ.
ಸೇನೆಯಲ್ಲಿ ಆಧುನಿಕ ತಂತ್ರಜ್ಞಾನದ ಮತ್ತೊಂದು ಮಜಲನ್ನು ದಾಟಿದೆ. ಇತ್ತೀಚೆಗೆ ರಕ್ಷಣಾ ಇಲಾಖೆಗೆ ಸಂಬಂಧಪಟ್ಟಂತೆ ಹಲವು ದಾಖಲೆಗಳನ್ನು ಬರೆದಿರೋ ಡಿಆರ್ಡಿಒ ಮತ್ತೊಂದು ರೆಕಾರ್ಡ್ ಮಾಡಿದೆ.
ರಕ್ಷಣಾ ಕ್ಷೇತ್ರದಲ್ಲಿ ಮೋದಿ ಸರ್ಕಾರ ಒಂದಲ್ಲ ಒಂದು ಯಶಸ್ವೀ ಪರೀಕ್ಷೆಗಳನ್ನು ನಡೆಸುತ್ತಿದೆ. ಭಾರತೀಯ ಸೇನೆಯ ಸಾಮರ್ಥ್ಯ ಹೆಚ್ಚಿಸೋ ನಿಟ್ಟಿನಲ್ಲಿ ವಿನೂತನ ತಂತ್ರಜ್ಞಾನಕ್ಕೆ ಸರ್ಕಾರ ಹೆಚ್ಚು ಒತ್ತು ಕೊಡುತ್ತದೆ. ಅದರಲ್ಲೂ ಸ್ವದೇಶಿ ನಿರ್ಮಾಣದ ಮೂಲಕ ಮೇಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಅಭಿಯಾನವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದೆ. ಒಂದಾದ ಮೇಲೊಂದು ಸಂಶೋಧನೆ ಮೂಲಕ ರಕ್ಷಣಾ ಇಲಾಖೆ ಬಲರ್ವನೆ ಮಾಡುತ್ತಿದೆ.
ಇದೀಗ ಡಿಆರ್ಡಿಒ ಮತ್ತೊಂದು ಪರೀಕ್ಷೆಯಲ್ಲಿ ಯಶಸ್ಸು ಕಂಡಿದೆ. ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ನಡೆದ ಮಾನವ ರಹಿತ ಲಘು ವಿಮಾನ ಹಾರಾಟ ಯಶಸ್ವಿಯಾಗಿದೆ.