ಪಶ್ಚಿಮ ಬಂಗಾಳದ ಅನೇಕ ಭಾಗಗಳಲ್ಲಿ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾದ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕೋಲ್ಕತಾ ಪೊಲೀಸರು, ಶನಿವಾರ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಮ್ಹೆರ್ಸ್ಟ್ ಸ್ಟ್ರೀಟ್ ಹಾಗೂ ನರ್ಕೆಲ್ದಂಗಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಈಗಾಗ್ಲೇ ಸಮನ್ಸ್ ನೀಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಂಡ ನೂಪುರ್‌ಗೆ ಸಧ್ಯ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅನೇಕ ಬಾರಿ ಸಮನ್ಸ್ ನೀಡಿದ್ದರೂ ನಮ್ಮ ಅಧಿಕಾರಿಗಳ ಮುಂದೆ ಹಾಜರಾಗಲು ವಿಫಲವಾದ ನಂತರ ಇಂದು ಲುಕ್‌ಔಟ್ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಕಳೆದ ತಿಂಗಳು ಆಕೆಯ ವಿರುದ್ಧ ಎಫ್‌ಐಆರ್‌ಗಳು ದಾಖಲಾದ ನಂತರ ಅಮ್ಹೆರ್ಸ್ಟ್ ಸ್ಟ್ರೀಟ್ ಮತ್ತು ನರ್ಕೆಲ್ದಂಗಾ ಪೊಲೀಸ್ ಠಾಣೆಗಳು ನೂಪುರ್ ಅವರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಕರೆದಿದ್ದವು ಎಂದು ಅಧಿಕಾರಿ ತಿಳಿಸಿದ್ದಾರೆ.
ಕೋಲ್ಕತಾಗೆ ಭೇಟಿ ನೀಡಿದರೆ ತನ್ನ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇದೆ ಎಂಬ ಆತಂಕವನ್ನು ಶರ್ಮಾ ಉಲ್ಲೇಖಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಮುಂದೆ ಹಾಜರಾಗಲು 4 ವಾರಗಳ ಕಾಲಾವಕಾಶವನ್ನು ಕೋರಿದ್ದಾರೆ.