ಉದ್ಯೋಗಾಕಾಂಕ್ಷಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಂತೋಷದ ವಿಚಾರವನ್ನು ನೀಡಿದೆ. ಪ್ರಸ್ತುತ ಸಾಲಿನಲ್ಲಿ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಸಂಭಾವನೆಯನ್ನು 9 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 3,500 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಮತ್ತು ಅತಿಥಿ ಉಪನ್ಯಾಸಕರ ಗೌರವಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಇನ್ನು ಕಳೆದ ವರ್ಷ 3,552 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿತ್ತು. ಈ ಉಪನ್ಯಾಸಕರ ಗೌರವಧನವನ್ನು ಕನಿಷ್ಟ 12 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಹಿಂದೆಯೂ ಪಿಯು ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೊರೋನಾ ಕಾರಣ ಗೌರವಧನ ಹೆಚ್ಚಿಸಿರಲಿಲ್ಲ. ಈ ಬಾರಿ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.