Sunday, April 19, 2026
Sunday, April 19, 2026

ವಿದ್ಯುತ್ ಸಂಪರ್ಕ ಪಡೆಯಲು ನಿರಾಕರಣ ಪತ್ರ ನಿಯಮ ರದ್ದು

Date:

ವಿದ್ಯುತ್ ಸಂಪರ್ಕ ಪಡೆಯಲು ಓಸಿ ನಿಯಮವನ್ನು ಕೆಇಆರ್​ಸಿ ತೆಗೆದು ಹಾಕಿದೆ. ಇನ್ನು ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ.

ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆ ಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದೆ. ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ನಿಯಮ ತೆಗೆದುಹಾಕಿದೆ. ಈ ಕುರಿತಾಗಿ ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಟ್ವೀಟ್​ ಮಾಡಿದ್ದಾರೆ.

ಕಟ್ಟಡಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಣೆ ಇನ್ನು ಸಾಧ್ಯವಿಲ್ಲ. ಕಾಂಗ್ರೆಸ್ ಕಾಲದ ಈ ಕತ್ತಲೆಭಾಗ್ಯದ ನಿಯಮವನ್ನು ಕೊನೆಗೂ ನಿವಾರಿಸಿದ್ದೇವೆ. ನಿಯಮ ಬದಲಾಯಿಸಿ ಕೆ ಆರ್ ಇಸಿ ಹೊರಡಿಸಿದ್ದ ಆದೇಶ ಇಂದಿನಿಂದಲೇ ರಾಜ್ಯಪತ್ರದ ಮೂಲಕ ಜಾರಿಗೆ ಬರುತ್ತಿದೆ. ಸರ್ವರಿಗೂ ಬೆಳಕು ಎಂಬ ನಮ್ಮ ಧ್ಯೇಯ ವಾಕ್ಯಕ್ಕೆ ಇನ್ನು ಯಾವುದೇ ಅಡ್ಡಿ ಇಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 5 ಲಕ್ಷ ಕುಟುಂಬಗಳಿಗೆ ಇದು ಅನುಕೂಲವಾಗಲಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಕತ್ತಲೆ ಭಾಗ್ಯದ ಕಾನೂನನ್ನು ಜಾರಿಗೆ ಬಂದಿದೆ. ನಮ್ಮ ಸರ್ಕಾರ ಅದನ್ನು ಬದಲಾಯಿಸಿದೆ. ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದು ಇಂಧನ, ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿ ಕೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿದೆ. ಬಿಬಿಎಂಪಿ ಮತ್ತು ಇಂಧನ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಧ್ಯತೆಯನ್ನು ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿದ್ದರು. ಬಳಿಕ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನುಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...