ಹಾವೇರಿ ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು ಡಿಪ್ಲೋಮಾ ಫಾರ್ಮಸಿ ಪದವೀಧರರು ಮತ್ತು ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಂದ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆ ತರೆಯಲು ಲಭ್ಯವಿರುವ ಕಟ್ಟಡವನ್ನು ಪರಿಶೀಲಿಸಿ ನಿಯಮಾನುಸಾರ ಎನ್.ಒ.ಸಿ. ಹಾಗೂ ಆರೋಗ್ಯ ರಕ್ಷಾ ಸಮಿತಿ ಅನುಮೋದನೆ ಪ್ರತಿಯೊಂದಿಗೆ ಲಿಖಿತ ಅರ್ಜಿಯನ್ನು ಹಾವೇರಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9448867799 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.