ಕೊಡನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ ಅವರು ಕನ್ನಡ ಮಾತ್ರವಲ್ಲದೇ ಬಹುಭಾಷಾ ಚಿತ್ರಗಳಲ್ಲೂ ಆಕ್ಟೀವ್ ಆಗಿರುವ ನಟಿ. ಸಾಲು ಸಾಲು ಸಿನಿಮಾಗಳಲ್ಲಿ ನಾಯಕ ನಟಿಯಾಗಿ ಮಿಂಚಿದ್ದಾರೆ. ಸದ್ಯ ಈಗ ನಟಿ ಹರ್ಷಿಕಾ ಪೂಣಚ್ಚ ಅವರು ‘ಮದರ್ ತೆರೇಸಾ ಸ್ಮಾರಕ’ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ನಟಿ ಮಾತ್ರವಲ್ಲದೇ ತೆರೆಯ ಹಿಂದೆಯೂ ಕೂಡ ಸಾಕಷ್ಟು ಸಮಾಜಮುಖಿ ಕೆಲಸ ಮಾಡಿದ್ದಾರೆ. ಭುವನಂ ಸಂಸ್ಥೆಯ ಮೂಲಕ ನಟ ಭುವನ್‌ಗೆ ಹರ್ಷಿಕಾ ಸಾಥ್ ನೀಡಿದ್ದರು. ಬೆಳ್ಳಿಪರದೆಯಲ್ಲಿ ಸ್ಟಾರ್ ಆಗಿ ಮಿಂಚುವ ಅದೆಷ್ಟು ಕಲಾವಿದರು ನಿಜ ಜೀವನದಲ್ಲೂ ಸ್ಟಾರ್ ಆಗಿ ಇನ್ನೊಬ್ಬರ ಕಷ್ಟಕ್ಕೆ ಸಾಥ್ ನೀಡುವುದು ತುಂಬಾ ಕಡಿಮೆ. ಆದರೆ ರಿಯಲ್ ಲೈಫ್‌ನಲ್ಲೂ ತಾವು ಸೂಪರ್ ಎಂದು ಹರ್ಷಿಕಾ ಪೂಣಚ್ಚ ತೋರಿಸಿ ಕೊಟ್ಟಿದ್ದರು.
ಇವರ ಸಮಾಜಮುಖಿ ಕಾರ್ಯ ಗುರುತಿಸಿ ಭುವನಂ ಸಂಸ್ಥೆಯ ಪರವಾಗಿ ನಟಿ ಹರ್ಷಿಕಾ, ‘ಮದರ್ ತೆರೇಸಾ ಸ್ಮಾರಕ’ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನಟಿ ಹರ್ಷಿಕಾ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯಿಂದ ಭುವನಂ ಸಂಸ್ಥೆಯ ಮೂಲಕ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲು ನಟಿಗೆ ಪ್ರೇರಣೆ ಸಿಕ್ಕಂತಾಗಿದೆ. ಪ್ರಶಸ್ತಿಯ ಕುರಿತು ಹರ್ಷಿಕಾ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಭಿಮಾನಿಗಳು ನಟಿಗೆ ಶುಭಹಾರೈಸಿದ್ದಾರೆ.