ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ 16,135 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ 24 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದುವರೆಗೆ,ದೇಶದಲ್ಲಿ ದಾಖಲಾದ ಕೊರೋನಾ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 4,35,18,564 ರಷ್ಟಾಗಿದೆ. ಮೃತಪಟ್ಟ ಸೋಂಕಿತರ ಸಂಖ್ಯೆ 5,25,223ಕ್ಕೆ ಏರಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿದೆ. ಪ್ರತಿದಿನದ ಪಾಸಿಟಿವಿಟಿ ದರವು ಶೇ 4.85 ರಷ್ಟಿದೆ.