ರಾಷ್ಟ್ರಪತಿ ಚುನಾವಣೆ ಬಳಿಕ ಉಪ ರಾಷ್ಟ್ರಪತಿ ಚುನಾವಣೆ ಕೂಡ ಕಾವೇರುತ್ತಿದೆ..64 ವರ್ಷದ ನಖ್ವಿ ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಬಹುದೆಂಬ ವದಂತಿ ಹರಡುತ್ತಿದೆ.
ನಖ್ವಿ ತಮ್ಮ ರಾಜೀನಾಮೆಯನ್ನು ಪ್ರಧಾನಿ ಮೋದಿಗೆ ನೀಡುವ ಮೊದಲು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾಗಿದ್ದು, ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಮೋದಿ ಕ್ಯಾಬಿನೆಟ್ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊರತುಪಡಿಸಿ, ನಖ್ವಿ ಅವರು ಅಟಲ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿದ್ದ ಏಕೈಕ ಸಚಿವರಾಗಿದ್ದರು.
2ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯನ್ನ ಕಣಕ್ಕಿಳಿಸುವ ಸಾಧ್ಯತೆ ಇದ್ದು, ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.