ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಎಲ್ಲರಿಗೂ ಸಂತೋಷ ತಂದಿದೆ.
ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದರು.
ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ಸಿಂಗ್ ಹಾಗೂ ಜೈರಾಮ್ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.