ಮತ್ತೆ ಸಂಸದನಾಗುವ ಆಸೆ ನನಗಿಲ್ಲ. ಇದೇ ಆಡಳಿತ ವ್ಯವಸ್ಥೆ ಮುಂದುವರಿದರೆ ಜನ ಬೀದಿಗೆ ಬೀಳುತ್ತಾರೆ. ಉದ್ದಟತನದ ಪರಮಾವಧಿ ತಲುಪಿರುವ ಅಧಿಕಾರಿಗಳಿಗೆ ಪ್ರಜಾಪ್ರಭುತ್ವ ಏನು ಎಂಬುದನ್ನು ತೋರಿಸುವೆ ನಿದ್ದೆಯಲ್ಲಿಯೂ ಕಾಡುವೆ ಎಂದು ಸಚಿವ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಮಾಹಿತಿ ಪಡೆಯುವ ವೇಳೆ ಹೊಸದುರ್ಗ ಭದ್ರಾ ಮೇಲ್ದಂಡೆ ವಿಭಾಗದ ಎಂಜಿನಿಯರ್ ಸಭೆಯಲ್ಲಿ ಇರಲಿಲ್ಲ. ಇದರಿಂದ ಕೆಂಡಾಮಂಡಲರಾದ ಸಚಿವರು ಸಭೆಗೆ ಗೈರು ಹಾಜರಾದವರಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ವರದಿ ರವಾನಿಸಿ ಶಿಸ್ತುಕ್ರಮಕ್ಕೆ ಸೂಚಿಸಿದ್ದಾರೆ.
ನನ್ನ ಆಡಳಿತ ವೈಖರಿ ಭಿನ್ನ. ರಾಜಕಾರಣಿಗಳ ಶ್ರೀರಕ್ಷೆಯಲ್ಲಿ ಸರಿಯಾಗಿ ಕೆಲಸ ಮಾಡದಿದ್ದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು ವ್ಯಾಪ್ತಿಯಲ್ಲಿ ಅತ್ಯಂತ ಸೌಮ್ಯವಾಗಿ ವರ್ತಿಸುತ್ತಿದ್ದೇನೆ. ಸರಿಯಾಗಿ ಕೆಲಸ ಮಾಡದೇ ತಾಳ್ಮೆ ಪರೀಕ್ಷೆ ಮಾಡುತ್ತಿದ್ದೀರಿ. ಇದರಿಂದ ಜಿಲ್ಲಾಡಳಿತಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಭದ್ರಾ ಮೇಲ್ದಂಡೆ ನಾಲೆಯ ವೈ ಜಂಕ್ಷನ್ ಬಳಿ ನಿರೀಕ್ಷಿತ ರೀತಿಯಲ್ಲಿ ಕೆಲಸ ನಡೆಯುತ್ತಿಲ್ಲ. ಕಾಮಗಾರಿ ಮುಂದುವರಿಸಲು ಪೊಲೀಸ್ ಭದ್ರತೆಯ ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿ ಗಮನ ಸೆಳೆದಿದ್ದೇನೆ. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬದ್ಧತೆಯಿಂದ ಕೆಲಸ ಮಾಡುವುದಾರೆ ಸಹಿಸಿಕೊಳ್ಳುವೆ. ಇಲ್ಲವಾದರೆ ಜಿಲ್ಲೆಯಿಂದ ಹೊರಹೋಗಿ ಎಂದು ಕಿಡಿಕಾರಿದ್ದಾರೆ.