ಕಳೆದ ಒಂದು ವಾರದಿಂದ ಎಲ್ಲೆಡೆ ಮಳೆ ಸುರಿಯುತ್ತಿದೆ. ಇದರಿಂದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಅಲ್ಲಲ್ಲಿ ಭೂಕುಸಿತವು ಕೂಡ ಕಂಡು ಬಂದಿದೆ.
ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.ಆರೆಂಜ್ ಅಲರ್ಟ್ ನೀಡಲಾಗಿದೆ.
ಬುಧವಾರದವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಭಾರಿ ಮಳೆಯಾಗಲಿರುವುದರಿಂದ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ.
ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಮಳೆ ಮುಂದುವರಿಯಲಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಇರಲಿದೆ. ಮಂಗಳವಾರ ಮಳೆ ಅಬ್ಬರ ತುಸು ಕಡಿಮೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಇರಲಿದೆ. ಇದೇ ವೇಳೆ ಉತ್ತರ ಒಳನಾಡಿನಲ್ಲಿ ಮಳೆ ಇನ್ನಷ್ಟು ವ್ಯಾಪಕವಾಗಲಿದೆ. ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಹಾಸನ ಜಿಲ್ಲೆಗೆ ಎಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬುಧವಾರ ಮಲೆನಾಡು ಮತ್ತು ಮಲೆನಾಡಿನ ತಪ್ಪಲಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಇರಲಿದೆ.