ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ನಾಳೆ ಕರಾವಳಿ ಜಿಲ್ಲೆಗಳ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಮುಖ್ಯಮಂತ್ರಿ ಪ್ರವಾಸ ಮಾಡಲಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ. ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ. ಬೆಂಗಳೂರಿನಲ್ಲಿ ಮಧ್ಯಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.