ಕರ್ನಾಟಕದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಮತ್ತು ರಾಜ್ಯದ ಇತರೆ ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ಅನ್ವಯಿಸಿದಂತೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯು 2019 ರ ಕ್ಯಾಲೆಂಡರ್ ವರ್ಷದ ಸಹಾಯಧನಕ್ಕಾಗಿ ಅರ್ಹ ನಿರ್ಮಾಪಕರಿಂದ ಅರ್ಜಿ ಆಹ್ವಾನಿಸಿದೆ.
ಆನ್‌ಲೈನ್ ವ್ಯವಸ್ಥೆಯಡಿ ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆ ದಿನಾಂಕವಾಗಿದೆ.
ದಿ. 1.1.2019 ರಿಂದ ದಿ. 31.12.2019 ರವರೆಗೆ ಸಿಬಿಎಫ್‌ಸಿ ಯಿಂದ ಸೆನ್ಸಾರ್ ಪ್ರಮಾಣ ಪತ್ರ ಪಡೆದಿರುವ ಮತ್ತು ರಾಜ್ಯದಲ್ಲಿ ಚಿತ್ರೀಕರಣ ನಡೆಸಲು ಇಲಾಖೆಯಿಂದ ಅನುಮತಿ ಪಡೆದಿರುವ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಲನಚಿತ್ರಗಳು ಮಾತ್ರ 2019 ರ ಕ್ಯಾಲೆಂಡರ್ ವರ್ಷದ ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹವಾಗಿರುತ್ತವೆ ಎಂದು ಇಲಾಖೆಯ ಆಯುಕ್ತ ಡಾ. ಪಿ. ಎಸ್. ಹರ್ಷ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿ ದ್ದಾರೆ.