ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ನಡೆಸಿರುವ ಬೇಹುಗಾರಿಕೆಯ ಸಂಗತಿ ಇದೀಗ ಬಯಲಾಗಿದೆ.
ನುಸ್ರತ್ ಮಿರ್ಜಾ ಎಂಬ ಪತ್ರಕರ್ತ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಹಲವು ಸಲ ಭಾರತಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಹಂಚಿಕೊಂಡಿರುವುದಾಗಿ ಅವರೇ ಬಹಿರಂಗಪಡಿಸಿದ್ದಾರೆ.
ರಾಜಕೀಯ ವಿಶ್ಲೇಷಕ ಶಕೀಲ್ ಚೌಧರಿ ನಡೆಸಿದ ಯೂಟ್ಯೂಬ್ ಸಂದರ್ಶನದಲ್ಲಿ ಅಂಕಣಕಾರ ನುಸ್ರತ್ ಮಿರ್ಜಾ ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ನಾನು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಪ್ರಯೋಜನಗಳನ್ನು ಪಡೆದಿದ್ದೇನೆ. ಸಾಮಾನ್ಯವಾಗಿ ಭಾರತಕ್ಕೆ ಆಗಮಿಸಲು ವೀಸಾಗೆ ಅರ್ಜಿ ಸಲ್ಲಿಸುವಾಗ 3 ಸ್ಥಳಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ 2002ರಿಂದ 2007ರವರೆಗೆ ಪಾಕಿಸ್ತಾನದಲ್ಲಿ ಖುರ್ಷಿದ್ ಕಸೂರಿ ವಿದೇಶಾಂಗ ಸಚಿವರಾಗಿದ್ದಾಗ 7 ನಗರಗಳಿಗೆ ಭೇಟಿ ನೀಡಲು ನಾನು ವೀಸಾ ಪಡೆದಿದ್ದೆ ಎಂದು ತಿಳಿಸಿದ್ದಾರೆ.