ಹೆಚ್ಚುತ್ತಿರುವ ಸಾಲದ ಹೊರೆ, ವಿದೇಶಿ ವಿನಿಮಯ ಮೀಸಲು ವೇಗವಾಗಿ ಕರಗುತ್ತಿರುವ ಕಾರಣ ಪಾಕಿಸ್ತಾನ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಿಸುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿವೆ.
ಕಳೆದ ತಿಂಗಳು ಚೀನಾ 2.3 ಶತಕೋಟಿ ಡಾಲರ್ ನೆರವು ನೀಡಿದೆ.
ಪಾಕಿಸ್ತಾನಕ್ಕೆ ನೆರವು ನೀಡುವುದನ್ನು ಐಎಂಎಫ್ ನಿಲ್ಲಿಸಿದೆ. ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ವಿಶ್ವ ಬ್ಯಾಂಕ್ ಹಾಗೂ ಏಷ್ಯಾ ಅಭಿವೃದ್ಧಿ ಬ್ಯಾಂಕ್ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿವೆ. ಇದು ಸಹ ದೇಶದ ಸಂಕಷ್ಟವನ್ನು ಹೆಚ್ಚಿಸಿದೆ ಎಂದು ತಜ್ಞರು ಹೇಳಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ಒಂದಂಕಿಗೆ ಕುಸಿದಿದೆ. ಪ್ರತಿ ತ್ರೈಮಾಸಿಕದಲ್ಲಿ ವಿದೇಶಿ ಸಾಲದ ಪ್ರಮಾಣವೂ ಹೆಚ್ಚುತ್ತಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ವಿದೇಶಿ ಸಾಲವನ್ನು ತೀರಿಸಲು ಸರ್ಕಾರವು ಅಧಿಕ ಬಡ್ಡಿದರದಲ್ಲಿ ಚೀನಾದಿಂದ ಸಾಲ ಪಡೆಯುತ್ತಿದೆ ಎನ್ನಲಾಗುತ್ತಿದೆ.
ಆದರೆ, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನೇತೃತ್ವದ ಮೈತ್ರಿಕೂಟ ಸರ್ಕಾರ ಚೀನಾದಿಂದ ಪಡೆದಿರುವ ಸಾಲದ ಬಡ್ಡಿದರವನ್ನು ಬಹಿರಂಗಪಡಿಸುತ್ತಿಲ್ಲ ಆರ್ಥಿಕ ತಜ್ಞರ ಹೇಳಿಕೆಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ