ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಇಲಾಖೆಯ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದೆ. ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಸಾಫ್ಟ್ ವೇರ್ ನ ಅಭಿವೃದ್ಧಿಕಾರ್ಯ ಮುಗಿದಿದೆ. ಅಲ್ಲದೇ ಈ ಸಾಫ್ಟ್ ವೇರ್ ಬಳಕೆ ಬಗ್ಗೆ ತರಬೇತಿ ಕೂಡ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕ ಇತ್ಯರ್ಥಗೊಳಿಸಲು ಪ್ರಾಯೋಗಿಕ ಪರೀಕ್ಷೆಗಾಗಿ ಬೆಂಗಳೂರು ನಗರ, ಬೆಳಗಾವಿ, ಕೊಡಗು, ಧಾರವಾಡ, ಮೈಸೂರು, ಯಾದಗಿರಿ ಮತ್ತು ಚಿಕ್ಕಮಗಳಊರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.