ಪ್ಲಾಸ್ಟಿಕ್ ಮುಕ್ತ ದೇಶ ಮಾಡಲು ಎಲ್ಲೆಡೆ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ. ವಿಶೇಷ ಎಂದರೆ, ಬೆಂಗಳೂರಲ್ಲಿ ಮರುಬಳಕೆಯ ಪ್ಲಾಸ್ಟಿಕ್ ಬಳಸಿ ರಸ್ತೆಯನ್ನೇ ನಿರ್ಮಾಣ ಮಾಡಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸದುಪಯೋಗ ಪಡಿಸಿಕೊಂಡಿದ್ದು, ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಸಹಕಾರಿಯಾಗಿದೆ.
ಇಕೋವರ್ಲ್ಡ್ ಮತ್ತು ಹೊರ ವರ್ತುಲ ರಸ್ತೆ ಅನ್ನು ಸಂಪರ್ಕಿಸುವ ಹೊಸ ಕಾಂಕ್ರೀಟ್ ರಸ್ತೆಯನ್ನು ಸಂಪೂರ್ಣವಾಗಿ 100% ಮರುಬಳಕೆಯ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾಮಾಜಿಕ ಉದ್ಯಮ ಮತ್ತು ORR ಕಂಪನಿಗಳ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಂಡಿದೆ. ಇದನ್ನು PotHoleRaja ‘GridMats’ ಎಂದು ಕರೆಯಲಾಗುತ್ತಿದ್ದು,ಇದು ಪೇಟೆಂಟ್ ಪಡೆದ ಉತ್ಪನ್ನವಾಗಿದ್ದು, ಪರಿಸರ ಸ್ನೇಹಿ ಹಾಗೂ ದೀರ್ಘಕಾಲ ಬಾಳಿಕೆ ಬರುವ ಮತ್ತು ಪಾದಚಾರಿ ಮಾರ್ಗಗಳು ಮತ್ತು ರಸ್ತೆಗಳನ್ನು ನಿರ್ಮಿಸಲು 100% ಮರುಬಳಕೆಯ ಪ್ಲಾಸ್ಟಿಕ್ ತ್ಯಾಜ್ಯದಿಂದ ಸಂಪೂರ್ಣವಾಗಿ ರಚಿಸಲಾಗಿದೆ ಎಂದು ಕಂಪನಿಯು ವಿವರಿಸಿದೆ.