ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆಡಳಿತವು ಸಾಮಾಜಿಕ ಅಶಾಂತಿಯನ್ನು ತಗ್ಗಿಸಲು ಮತ್ತು ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ ಎಂದು ಭಾನುವಾರ ತಡರಾತ್ರಿ ಬಿಡುಗಡೆಯಾದ ಸರ್ಕಾರದ ಸೂಚನೆ ತಿಳಿಸಿದೆ.
ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಹಾಗೂ ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿ ಘೋಷಣೆ ಸೂಕ್ತವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶ್ರೀಲಂಕಾದ ಉಚ್ಛಾಟಿತ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿರುದ್ಧದ ಜನರ ದಂಗೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪಲಾಯನ ಮಾಡಿದ್ದಾರೆ.