Wednesday, October 2, 2024
Wednesday, October 2, 2024

ಮೈಸೂರಿನಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಪಂದ್ಯಾವಳಿ

Date:

ಆಗಸ್ಟ್ 7 ರಂದು ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಮಹಾರಾಜ ಟ್ರೋಫಿ ಕೆ ಎಸ್ ಎ ಟಿ 20 ಟೂರ್ನಿಯಲ್ಲಿ ಶಿವಮೊಗ್ಗ ದ ತಂಡವು ಭಾಗವಹಿಸಲಿದೆ.

ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀ ಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಈ ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸಿದೆ.

ಶಿವಮೊಗ್ಗದ ರಾಯಲ್ ಆರ್ಕಿಡ್ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ ಕೆಎಸ್ ಸಿ ಎಂ ಜಂಟಿ ಕಾರ್ಯದರ್ಶಿ ಶಬೀರ್ ತಾರಾಪೂರ್ ಅವರು, ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ನೀಡುವಲ್ಲಿ ಕೆ ಎಸ್ ಸಿಎ ಆದ್ಯತೆಯನ್ನು ನೀಡುತ್ತದೆ. ಮಹಾರಾಜ ಟ್ರೋಫಿ ಕೆ ಎಸ್ ಸಿ ಎ ಟಿ20ಯಲ್ಲಿ ಶಿವಮೊಗ್ಗ ಜಿಲ್ಲೆಯು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ.ಈ ಮೂಲಕ ಈ ವಲಯದ ಆಟಗಾರರಿಗೆ ನೇರಪ್ರಸಾರಗೊಳ್ಳುವ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸದಂತಾಗಿದೆ. ಎಂದರು.

ಟೂರ್ನಿಯಲ್ಲಿ ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ.ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿದಂತೆ 16 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ತಿಳಿಸಿದರು.

ತಂಡದ ಆಟಗಾರರನ್ನು ಪ್ಲೇಯರ್ಸ್ ಡ್ರಾಫ್ಟ್ ಮೂಲಕ ಆಯ್ಕೆ ಮಾಡಲಾಗುವುದು. ಇದಕ್ಕೆ ಕೃತಕ ಬುದ್ಧಿಮತ್ತೆಯ ಕ್ರಮವನ್ನು ಅನುಸರಿಸುವುದು. ಆಟಗಾರರ ಹಿಂದಿನ ಸಾಧನೆಗಳನ್ನು ಆಧರಿಸಿ ಅವರನ್ನು ಬೇರೆ ಬೇರೆ ವರ್ಗಗಳನ್ನಾಗಿ ವಿಂಗಡಿಸಿ ಬೆಲೆ ನಿಗದಿಪಡಿಸಲಾಗುವುದು. ಕೆಎಸ್ ಸಿಎಯು ನೀಯೋ
ಜಿಸಿರುವ ಸಮಿತಿಯು ಪ್ರತಿಯೊಂದು ತಂಡಕ್ಕೂ ತರಬೇತಿ ಸಿಬ್ಬಂದಿ ಮತ್ತು ಸಹಾಯಕ ಸಿಬ್ಬಂದಿಯನ್ನು ನಿಯೋಜಿಸಲಿದೆ ಎಂದು ವಿವರಿಸಿದರು.

ಪ್ರತಿಯೊಂದು ತಂಡವು ಆಯಾ ಪ್ರದೇಶದ ಇಬ್ಬರು ಆಟಗಾರರನ್ನು ಒಳಗೊಂಡಿರಬೇಕಾಗಿರುವುದರಿಂದ ಶಿವಮೊಗ್ಗದ ಆಟಗಾರರಿಗೆ ಮಹಾರಾಜ ಟ್ರೋಫಿ ಕೆ ಎಸ್ ಸಿ ಎ ಟಿ 20 ಇಲ್ಲಿಯ ತಂಡದಲ್ಲಿ ಸ್ಥಾನ ಪಡೆಯಲು ಉತ್ತಮ ಅವಕಾಶ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್‌. ಅರುಣ್ ಅವರು ತಿಳಿಸಿದರು.

ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.

ವಿಶೇಷವಾಗಿ ವಿನ್ಯಾಸಗೊಳಿಸಿರುವ ಮಹಾರಾಜ ಟ್ರೋಫಿಯನ್ನು ಪ್ರದರ್ಶನ
ಮಾಡಲಾಯಿತು.

ಲಾಂಚನ ಮತ್ತು ಮಹಾರಾಜ ವಿಷಯಾಧಾರಿತ ಟ್ರೋಫಿಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಲೋಹದಲ್ಲಿ ಅತ್ಯಂತ ಸೂಕ್ಷ್ಮ ವಾಗಿ ಕೆತ್ತಲಾಗಿರುವ ಈ ಟ್ರೋಫಿಯನ್ನು 11ರೆಕ್ಕೆಗಳಿದ್ದು, ಇದು ಕ್ರಿಕೆಟ್ ತಂಡದಲ್ಲಿರುವ ಒಟ್ಟೂ ಆಟಗಾರರನ್ನು ಪ್ರತಿನಿಧಿಸುತ್ತದೆ. ಈ ಟೂರ್ನಿಯು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಟಾರ್ಟ್ ಸ್ಪೋರ್ಟ್ಸ್ ಕನ್ನಡ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಿ.ಆರ್. ನಾಗರಾಜ್, ಕೆ.ಎಸ್.ಸುಬ್ಬರಮಣ್ಯ, ಕೆ .ಎಸ್. ಶಶಿಧರ , ಸದಾನಂದ, ಮಂಜುನಾಥ್ ರಾಜು , ಶಿವಮೊಗ್ಗ ಕ್ರಿಕೆಟ್ ಅಸೋಸಿಯೇಷನ್ ವಿಭಾಗದ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...