ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದೆ.
ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ, ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ನಾಳೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿದೆ.
ಈ ಔತಣಕೂಟದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದಾರೆ.
ಶುಕ್ರವಾರ ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಏರ್ಪಡಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ.