ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 15ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಧ್ವಜಾರೋಹಣವನ್ನು ನೆರವೇರಿಸಲು ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ-ಬೆಳಗಾವಿ,
ಸಾರಿಗೆ ಸಚಿವ ಬಿ.ಶ್ರೀರಾಮುಲು-ಬಳ್ಳಾರಿ, ವಸತಿ ಸಚಿವ ವಿ.ಸೋಮಣ್ಣ-ಚಾಮರಾಜನಗರ, ಅರಣ್ಯ ಸಚಿವ ಉಮೇಶ್ ಕತ್ತಿ-ವಿಜಯಪುರ, ಮೀನುಗಾರಿಕೆ ಸಚಿವ ಎಸ್.ಅಂಗಾರ-ಉಡುಪಿ, ಗೃಹ ಸಚಿವ ಆರಗ ಜ್ಞಾನೇಂದ್ರ-ತುಮಕೂರು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ-ರಾಮನಗರ.
ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್-ಬಾಗಲಕೋಟೆ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್-ಕೊಪ್ಪಳ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ-ಉತ್ತರ ಕನ್ನಡ,
ಪಶುಸಂಗೋಪನೆ ಸಚಿವ ಪ್ರಭು ಚೌವಾಣ್-ಯಾದಗಿರಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ-ಕಲಬುರಗಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್-ಹಾವೇರಿ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್-ಮೈಸೂರು, ಕೃಷಿ ಸಚಿವ ಬಿ.ಸಿ.ಪಾಟೀಲ್-ಚಿತ್ರದುರ್ಗ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ)-ದಾವಣಗೆರೆ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್-ಬೆಂಗಳೂರು ಗ್ರಾಮಾಂತರ, ಅಬಕಾರಿ ಸಚಿವ ಕೆ.ಗೋಪಾಲಯ್ಯ-ಹಾಸನ, ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ-ವಿಜಯನಗರ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜು-ಚಿಕ್ಕಬಳ್ಳಾಪುರ.
ರೇಶ್ಮೆ ಸಚಿವ ಡಾ.ನಾರಾಯಣಗೌಡ-ಶಿವಮೊಗ್ಗ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್-ಕೊಡಗು, ಇಂಧನ ಸಚಿವ ವಿ.ಸುನೀಲ್ ಕುಮಾರ್-ದಕ್ಷಿಣ ಕನ್ನಡ, ಗಣಿ ಸಚಿವ ಆಚಾರ್ ಹಾಲಪ್ಪ-ಧಾರವಾಡ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ-ರಾಯಚೂರು, ತೋಟಗಾರಿಕೆ ಸಚಿವ ಮುನಿರತ್ನ-ಕೋಲಾರ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ನೇಮಿಸಲಾಗಿದೆ.
ಗದಗ, ಮಂಡ್ಯ, ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಧ್ವಜಾರೋಹಣ ನೆರವೇರಿಸಲು ನೇಮಿಸಲಾಗಿದೆ.
ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.