Tuesday, March 24, 2026
Tuesday, March 24, 2026

ರಾಜ್ಯದ ಶ್ರಮಿಕ ಫಲಾನುಭವಿಗಳಿಗೆ ಪಿಂಚಣಿ ಏರಿಕೆ

Date:

ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇನ್ನು ಫಲಾನುಭವಿಗಳ ನೋಂದಣಿ ವೇಳೆ ಮಂಡಳಿಗೆ ಪಾವತಿಸಬೇಕಿರುವ ವಂತಿಗೆ ಹಣ ಸಂಪೂರ್ಣ ಮನ್ನಾ ಮಾಡುವ ಶ್ರಮ ಸಾಮರ್ಥ್ಯ ಸೌಲಭ್ಯದಡಿ ಮಂಡಳಿಯ ಫಲಾನುಭವಿಗಳು ತರಬೇತಿ ಪಡೆಯದೆಯೇ ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ಪಡೆಯಲು ಗೃಹ ಭಾಗ್ಯ ಸೌಲಭ್ಯದಡಿ ಅರ್ಹಹ ಫಲಾನುಭವಿಗಳಿಗೆ ಮನೆ ಕಟ್ಟಲು ನೀಡುವ ಧನ ಸಹಾಯ 10 ಕಂತುಗಳಲ್ಲಿ ನೀಡಲು ಸರಳೀಕರಿಸಿ ತಿದ್ದುಪಡಿ ಮಾಡಲು ಒಪ್ಪಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...