ವೇಗವಾಗಿ ಹರಡುತ್ತಿರುವ ಮಂಕಿಪಾಕ್ಸ್ ಸೋಂಕನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ನಿನ್ನೆ ಶನಿವಾರ ಘೋಷಿಸಿದೆ.
ಈ ಕುರಿತು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಮಾಹಿತಿ ನೀಡಿದೆ. ಮಂಕಿಪಾಕ್ಸ್ ವೈರಾಣು ಹರಡುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಇದುವರೆಗೆ ಮಂಕಿಪಾಕ್ಸ್ ವೈರಸ್‌ನ 3 ಪ್ರಕರಣ ವರದಿಯಾಗಿವೆ. ಈ ಎಲ್ಲ ಪ್ರಕರಣ ಕೇರಳದಲ್ಲೇ ದೃಢಪಟ್ಟಿವೆ.
ಕೇರಳದ ಕೊಲ್ಲಂ, ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಮಂಕಿಪಾಕ್ಸ್ ಸೋಂಕು ವರದಿಯಾಗಿವೆ. ಈ ಪೈಕಿ ಕಣ್ಣೂರಿನ ಯುವಕ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದರು.