ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದೆ.ನಿನ್ನೆ ಶನಿವಾರ ಸಂಸತ್ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆದಿದ್ದಾರೆ.
ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.
ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.
ಕೋವಿಂದ್ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು.