ರಾಜ್ಯ ಸರ್ಕಾರವು ದಲಿತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದೆ.ಸಪ್ತಪದಿ ಮಾದರಿಯಲ್ಲೇ ಶುಭಲಗ್ನ ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು,ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಶುಭಲಗ್ನ ಯೋಜನೆ ಶೀಘ್ರವೇ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಶುಭಲಗ್ನ ಯೋಜನೆಯಿಂದ ಎಸ್. ಸಿ. ಸಮುದಾಯದ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಪ್ರತಿ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ, ಉಪಜಾತಿಗಳ ಸಮಗ್ರ ವರದಿಯನ್ನು ತರಿಸಿಕೊಂಡಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಶುಭಲಗ್ನ ಘೋಷಣೆ ಆಗಲಿದೆ. ಶುಭಲಗ್ನ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದರು.