ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಅನೇಕ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಅಥವಾ ದೂರವಾಣಿ 0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ಮಾಹಿತಿ ತಿಳಿಸಿದೆ.