Monday, November 2, 2026
Monday, November 2, 2026

ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣ

Date:

ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ, ಪ್ರೌಢಶಾಲೆಯನ್ನು ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದಿಂದ 95 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಬಾಗಲಕೋಟೆಯ ಎರಡು, ಬಳ್ಳಾರಿಯ 11, ಬೆಂಗಳೂರು ಸೌಥ್ ನ 3 ಶಾಲೆ, ಬೆಳಗಾವಿಯ ಐದು ಶಾಲೆಗಳು, ಬೆಳಗಾವಿ ಚಿಕ್ಕೋಡಿ ವಿಭಾಗದಿಂದ 7, ಬೆಂಗಳೂರು ನಾರ್ಥ್ ನ 2, ಚಾಮರಾಜನಗರ ಒಂದು, ಚಿತ್ರದುರ್ಗ ಒಂದು, ದಾವಣಗೆರೆ ಒಂದು, ಧಾರವಾಡ ಮೂರು, ಗದಗ ಎರಡು, ಹಾವೇರಿಯ 16 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯಾಗಿ ಉನ್ನತೀಕರಿಸಿದೆ.

ಕಲಬುರ್ಗಿ ಜಿಲ್ಲೆಯ ನಾಲ್ಕು, ಕೊಪ್ಪಳದ 6, ಮಂಡ್ಯ 1, ರಾಯಚೂರು 6, ಉತ್ತರ ಕನ್ನಡ ಸಿರಸಿ 1, ವಿಜಯಪುರ 5 ಮತ್ತು ಯಾದಗಿರಿಯ 18 ಶಾಲೆಗಳನ್ನು ಪ್ರೌಢ ಶಾಲೆಯಾಗಿ ಉನ್ನತೀಕರಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...