ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ನ್ಯಾಯಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾರ್ಚ್‌ನಲ್ಲೇ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಇನ್ನೂ ಅವುಗಳು ಲಿಸ್ಟಿಂಗ್ ಆಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ಅರಿಕೆ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನ್ಯಾಯಮೂರ್ತಿಯೊಬ್ಬರು ಅನಾರೋಗ್ಯಕ್ಕೀಡಾಗಿರುವ ಕಾರಣ ವಿಳಂಬವಾಗುತ್ತಿದೆ. ಆದಷ್ಟು ಬೇಗ ಹೊಸ ಪೀಠವನ್ನು ರಚಿಸುತ್ತೇವೆ ಎಂದಿದೆ.
ಇದರೊಂದಿಗೆ, ಹಿಜಾಬ್ ಗೆ ಹೇರಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂಬ ಮನವಿಯನ್ನು ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠ ತಿರಸ್ಕರಿಸಿದೆ.
