ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಆಗಮಿಸಿರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಗೆ, ಹಾಲಿ ನಡೆಯುತ್ತಿರುವ ಕೊರೊನಾ ಬೂಸ್ಟರ್ ಡೋಸ್ ಅಭಿಯಾನ ಪೂರ್ಣಗೊಂಡ ನಂತರ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.
ನವದೆಹಲಿಯಲ್ಲಿ, ತಮ್ಮನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳ ವಿಧಾಸಭೆಯ ವಿಪಕ್ಷಗಳ ನಾಯಕ ಸುವೇಂದು ಅಧಿಕಾರಿ ಅವರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾ, ಈ ವಿಚಾರ ತಿಳಿಸಿದರು.