ಶಿವಮೊಗ್ಗದಲ್ಲಿ ಆಗಸ್ಟ್ 6ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ಕಾಲೇಜು ವತಿಯಿಂದ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಆಗಸ್ಟ್ 6ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ ಕಾಲೇಜು, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಆನ್‍ಲೈನ್ ಲಿಂಕ್ https://forms.gle/8F4Uw5ieZFWCxnju5 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮೇಳದಲ್ಲಿ ಪಾಲ್ಗೊಳ್ಳಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255294ಗೆ ಕರೆ ಮಾಡಬಹುದಾಗಿದೆ. ಮೊಬೈಲ್ ಸಂಖ್ಯೆ 8217478207.
