Sunday, March 29, 2026
Sunday, March 29, 2026

ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆ ಪ್ರವೇಶಕ್ಕೆ ಕಠಿಣ ನಿಯಮ

Date:

ಈ ಬಾರಿಯ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೇ ಉಗ್ರ ಸಂಘಟನೆಗಳಿಂದ ಭಯೋತ್ಪಾದನಾ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರೀಯ ಗುಪ್ತಚರ ಇಲಾಖೆ (ಐಬಿ) ಎಚ್ಚರಿಸಿದೆ.

ರೋಹಿಂಗ್ಯಾ, ಅಫ್ಘಾನಿಸ್ತಾನ ಹಾಗೂ ಸುಡಾನ್ ದೇಶದ ಹೆಚ್ಚಿನ ಜನರು ವಾಸಿಸುವ ದೆಹಲಿಯಲ್ಲಿ ಹದ್ದಿನಕಣ್ಣು ಇಡುವಂತೆ ಹಾಗೂ ಟಿಫಿನ್ ಬಾಂಬ್, ಸ್ಟಿಕ್ಕಿ ಬಾಂಬ್ ಮತ್ತು ವಿವಿಐಡಿ ಬೆದರಿಕೆಯನ್ನು ಎದುರಿಸಲು ಜಾಗರೂಕರಾಗಿರುವಂತೆ ಹೇಳಿದೆ.

ಲಷ್ಷರ್, ಜೆಇಎಂ ಮತ್ತು ಇತರೆ ಕೆಲವು ಭಯೋತ್ಪಾದನಾ ಸಂಘಟನೆಗಳಿಂದ ದಾಳಿಯ ಅಪಾಯವಿರುವ ಬಗ್ಗೆ ಐಬಿ 10 ಪುಟಗಳ ವರದಿ ನೀಡಿದೆ.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಮೇಲಿನ ದಾಳಿ, ಉದಯಪುರ ಹತ್ಯೆ ಹಾಗೂ ಅಮರಾವತಿಗಳಲ್ಲಿ ನಡೆದ ಘಟನೆಗಳನ್ನೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಕೆಂಪುಕೋಟೆಗೆ ಪ್ರವೇಶಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಅದು ದೆಹಲಿ ಪೊಲೀಸರಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...

Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.

Rotary Shivamogga ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಶಿವಮೊಗ್ಗ...