ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಮಿತ್ ಶಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಯಡಿಯೂರಪ್ಪ ಅವರನ್ನು ಭೇಟಿಯಾಗುವ ಕುರಿತು ನಿನ್ನೆಯೇ ಅಮಿತ್ ಶಾ ಅವರು ಸಂದೇಶ ಕಳುಹಿಸಿದ್ದರು ಎನ್ನಲಾಗಿದ್ದು, ಅದರಂತೆ ಇಂದು ಹೋಟೆಲ್ ಗೆ ತೆರಳಿದ್ದ ಯಡಿಯೂರಪ್ಪ, ಅವರೊಂದಿಗೆ ಉಪಹಾರ ಸೇವಿಸುವುದರ ಜೊತೆಗೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಶಿಕಾರಿಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಕಣಕ್ಕಿಳಿಯುವುದಾಗಿ ತಿಳಿಸಿದ್ದರು. ಈ ವಿಚಾರಗಳ ಬಗ್ಗೆಯೇ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ