ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ.
ಆಗಸ್ಟ್6ರಂದು ಶನಿವಾರ ಅತ್ಯಧಿಕ ಭಾರಿ ಮಳೆ ಆಗುವ ಕಾರಣಕ್ಕೆ ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 6ರಂದು ಕರ್ನಾಟಕ ಕರಾವಳಿಯ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20ಸೆಂ.ಮೀ.ಗಿತಂಲೂ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇನ್ನೂ ಇದೇ ಮೂರು ದಿನದ ಅವಧಿಯಲ್ಲಿ ಬೀದರ್, ಬೆಳಗಾವಿ, ಹಾವೇರಿ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಾಗ ಸಾಧಾರಣದಿಂದ ಭಾರಿ ಮಳೆ ಬೀಳುವ ಸಂಭವವಿದೆ.
ರಾಜ್ಯದಲ್ಲಿ ಆಗಸ್ಟ್ 07ರವರೆಗೆ ಅತೀ ಭಾರಿ ಮಳೆ ಮುಂದುವರಿಯಲಿದೆ. ಈ ಮೂರು ದಿನ ಕರವಳಿ ಜಿಲ್ಲೆಗಳೂ ಒಳಗೊಂಡಂತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಮಡಿಕೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ‘ಆರೆಂಜ್ ಅಲರ್ಟ್’ ಕೊಡಲಾಗಿದೆ.