ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿದೆ. ಈ ಸಂದರ್ಭದಲ್ಲಿ ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಖಾದ್ಯ ತೈಲಗಳ ಬೆಲೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಬಹುದು.
ಜಾಗತಿಕ ಬೆಲೆಗಳ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಖಾದ್ಯ ತೈಲ ಸಂಸ್ಕರಣಾಕಾರರು ಹಾಗೂ ತಯಾರಕರು ಬೆಲೆಗಳನ್ನು 10ರಿಂದ 12 ರೂಪಾಯಿರಷ್ಟು ಕಡಿತಗೊಳಿಸಲು ಒಪ್ಪಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿಯೊಂದು ತಿಳಿಸಿದೆ.
ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಅಡುಗೆ ಎಣ್ಣೆ ತಯಾರಕ ಕಂಪನಿಗಳು ಜಾಗತಿಕ ಬೆಲೆಗಳೊಂದಿಗೆ ಸರಿದೂಗಿಸಿ, ಸಾಮಾನ್ಯ ಜನರು ಬಳಸುವ ಅಡುಗೆ ಎಣ್ಣೆಯ ದರವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ.
ಅಡುಗೆ ಎಣ್ಣೆ ತಯಾರಕರು ಜಾಗತಿಕ ಬೆಲೆಗಳನ್ನು ತಗ್ಗಿಸುವ ದೃಷ್ಟಿಯಿಂದ ಖಾದ್ಯ ತೈಲ ಬೆಲೆಯನ್ನು 10ರಿಂದ 12 ರೂಪಾಯಿರಷ್ಟು ಕಡಿತಗೊಳಿಸಲು ಒಪ್ಪಿದ್ದಾರೆ. ನಾವು ಅವರೊಂದಿಗೆ ಉತ್ತಮ ಸಭೆ ನಡೆಸಿದ್ದೇವೆ. ಅಲ್ಲಿ ನಾವು ದತ್ತಾಂಶಗಳೊಂದಿಗೆ ವಿವರವಾದ ಪ್ರಸ್ತುತಿಯನ್ನು ನೀಡಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.