Saturday, December 6, 2025
Saturday, December 6, 2025

ಚುನಾಯಿತ ಉಪರಾಷ್ಟ್ರಪತಿ ಧನ್ಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Date:

ನೂತನ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ರೈತನ ಮಗ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವುದು ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ 6 ಉಪರಾಷ್ಟ್ರಪತಿ ಚುನಾವಣೆಗಳಿಗೆ ಹೋಲಿಸಿದರೆ ಅತ್ಯಧಿಕ ಶೇ. 74ರಷ್ಟು ಮತಗಳನ್ನು ಪಡೆದು ವಿಜಯಶಾಲಿಯಾದ ಧನಕರ್ ಅವರನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಧನಕರ್ ಅವರಿಗೆ ಮತದಾನ ಮಾಡಿದ ಎಲ್ಲ ಸಂಸದರಿಗೂ ಮೋದಿ ಧನ್ಯವಾದ ಹೇಳಿದರು.

ನಾವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ, ಅದ್ಬುತ ಕಾನೂನು ಜ್ಞಾನ ಹಾಗೂ ಬುದ್ಧಿಜೀವಿಯಾಗಿರುವ ರೈತನ ಮಗನನ್ನು ದೇಶದ ಉಪ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪಕ್ಷದ ಅದ್ಭುತ ಬೆಂಬಲದೊಂದಿಗೆ ಭಾರತದ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧನಕರ್ ಜಿ ಅವರಿಗೆ ಅಭಿನಂದನೆಗಳು. ಅವರು ಅತ್ಯುತ್ತಮ ಉಪ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ. ಅವರ ಬುದ್ಧಿವಂತಿಕೆಯಿಂದ ನಮ್ಮ ರಾಷ್ಟ್ರವು ಮಹತ್ತರವಾದ ಲಾಭವನ್ನು ಪಡೆಯುತ್ತದೆ ಎಂದು ಅವರು ಹೇಳಿದ್ದಾರೆ.

ಧನಕರ್ ಅವರು 528 ಮತಗಳನ್ನು ಪಡೆದರೆ, ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರು 182 ಮತಗಳನ್ನು ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...