ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾಬೆನ್ ಪಟೇಲ್ ಅವರು ನಿನ್ನೆ ಶನಿವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪ್ಯಾರಾ ಟೇಬಲ್ ಟೆನಿಸ್ ಮಹಿಳೆಯರ ಸಿಂಗಲ್ಸ್‌ನಲ್ಲಿ ನೈಜೀರಿಯಾದ ಇಫೆಚುಕ್ವುಡೆ ಕ್ರಿಸ್ಟಿಯಾನಾ ಇಕ್ಪಿಯೋಯಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದ ಗುಜರಾತ್‌ನ 35 ವರ್ಷದ ಭಾವಿನಾಬೆನ್ ನೈಜೀರಿಯಾದ ಇಫೆಚುಕ್ವುಡೆ ಕ್ರಿಸ್ಟಿಯಾನಾ ಇಕ್ಪಿಯೋಯಿ ವಿರುದ್ಧ 3ರಿಂದ0 ನೇರ ಸೆಟ್‌ಗಳಲ್ಲಿ ಇಕ್ಪಿಯೊಯಿ ವಿರುದ್ಧ ಪ್ರಾಬಲ್ಯ ಸಾಧಿಸಿದರು.