Thursday, March 19, 2026
Thursday, March 19, 2026

ನಟ ಪ್ರಕಾಶ್ ರೈ ಕೊಡುಗೆಯ ಅಪ್ಪುಎಕ್ಸ್ ಪ್ರೆಸ್ ಅಂಬುಲೆನ್ಸ್

Date:

ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ ಎಂದು ಹೇಳಿದರು.

ಅಪ್ಪು ಬಾಲ್ಯದಿಂದಲೂ ನಾನು ನೋಡಿದ ಹುಡುಗ, ಆತ ಸಮಾಜಮುಖಿಯಾಗಿ ಬೆಳೆದ ವ್ಯಕ್ತಿ. ಆ ಎತ್ತರಕ್ಕೆ ಬೆಳೆದ ವ್ಯಕ್ತಿಯಿಂದ ಇನ್ನೊಂದಷ್ಟು ಕೆಲಸಗಳು ಆಗಬೇಕಾಗಿತ್ತು. ಆ ಜನಪರ ವ್ಯಕ್ತಿತ್ವವನ್ನು ಅನುಕರಿಸುವ ಭಾಗವಾಗಿ ಪ್ರತಿಷ್ಠಾನದಿಂದ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...