ಕೈಮಗ್ಗ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಕೈಮಗ್ಗ ಉತ್ಪನ್ನಗಳನ್ನು ಗ್ರಾಹಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಮಾಡಿ ಬಳಸುವ ಮೂಲಕ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಲಾದ ಕೈಮಗ್ಗ ನೇಕಾರರ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ 2022ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕೃಷಿ ಕ್ಷೇತ್ರದಂತೆ ಕೈಮಗ್ಗ ಕ್ಷೇತ್ರದಲ್ಲೂ ಜಾರಿಗೊಳಿಸಿರುವ ಹಲವಾರು ಯೋಜನೆಗಳು ನೇಕಾರರಿಗೆ ನೆರವಾಗಿದೆ. ರಾಜ್ಯದ ಕೈಮಗ್ಗ ಉತ್ಪನ್ನಗಳು ಗುಣಮಟ್ಟ ಹಾಗೂ ಉತ್ಕೃಷ್ಟತೆ ಹೊಂದಿದ್ದು ಖರೀದಿ ಮಾಡುವ ಮೂಲಕ ನೇಕಾರರನ್ನು ಉತ್ತೇಜಿಸಿ ಬೆಂಬಲಿಸಬೇಕು ಎಂದು ಹೇಳಿದರು.