ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತ ಬ್ಯಾಡ್ಮಿಂಟನ್‌ನಲ್ಲಿ ಎರಡನೇ ಪದಕವನ್ನು ಪಡೆದುಕೊಂಡಿದೆ. ಸ್ಟಾರ್ ಷಟ್ಲರ್ ಕಿಡಂಬಿ ಶ್ರೀಕಾಂತ್ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತ ಬ್ಯಾಡ್ಮಿಂಟನ್‌ನಲ್ಲಿ ಎರಡನೇ ಪದಕವನ್ನು ಪಡೆದುಕೊಂಡಿದೆ.
ಸ್ಟಾರ್ ಷಟ್ಲರ್ ಕಿಡಂಬಿ ಶ್ರೀಕಾಂತ್ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತದ ಪದಕಗಳ ಸಂಖ್ಯೆ 50 ದಾಟಿದೆ. ಭಾನುವಾರ ರಾತ್ರಿ ನಡೆದ ಕಂಚಿನ ಪದಕದ ಪಂದ್ಯದಲ್ಲಿ ಸಿಂಗಾಪುರದ ಜಿಯಾ ಹೆಂಗ್ ತೆಹ್ ಅವರನ್ನು 21-15, 21-18 ನೇರ ಗೇಮ್‌ಗಳಿಂದ ಕಿಡಂಬಿ ಸೋಲಿಸಿದರು. ಆದಾಗ್ಯೂ, 2018 ರ ಬೆಳ್ಳಿ ಪದಕ ವಿಜೇತ ಕಿಡಂಬಿ ಶ್ರೀಕಾಂತ್ ಈ ಕ್ರೀಡಾಕೂಟದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಏಕೆಂದರೆ ಅವರು ಚಿನ್ನದ ಪದಕ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲ್ಪಟ್ಟಿದ್ದರು.